*ಕೊಪ್ಪಳದಲ್ಲಿ 34 ಗ್ರಾಮ ಲೆಕ್ಕಿಗರ ನೇಮಕಾತಿ*
*GK4U*
*ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕೊಪ್ಪಳ ಜಿಲ್ಲೆಯಲ್ಲಿ ವರ್ಗೀಕರಣ ಮತ್ತು ಮಿಸಲಾತಿ ಅನ್ವಯ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.*
*ಮುಂಬಡ್ತಿ, ವರ್ಗಾವಣೆ ಇನ್ನಿತರೆ ಕಾರಣಗಳಿಂದ 34 ಗ್ರಾಮ ಲೆಕ್ಕಿಗರು ತೆರವಾಗಿದ್ದು, ಖಾಲಿ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.*
*ಹುದ್ದೆಗಳ ವಿವರ*
*ಗ್ರಾಮ ಲೆಕ್ಕಿಗ: 34 ಹುದ್ದೆಗಳು*
*ವೇತನ ಶ್ರೇಣಿ: ರೂ.11600-21000/-*
*ಶೈಕ್ಷಣಿಕ ವಿದ್ಯಾರ್ಹತೆ*
*ಕರ್ನಾಟಕ ಪಿಯು ಬೋರ್ಡ್ ನಡೆಸುವ ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್ಇ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.ದೂರ ಶಿಕ್ಷಣದ ಮೂಲಕ ಪಿಯುಸಿ ಅಥವಾ ಸಮಾನಂತರ ವಿದ್ಯಾರ್ಹತೆ ಹೊಂದಿರುವವರು ಅರ್ಹರಿರುವುದಿಲ್ಲ. ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.*
*ವಯೋಮಿತಿ*
*ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷಗಳು. (ಒಬಿಸಿ ವರ್ಗದವರಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ಇದೆ)*
*ಅರ್ಜಿ ಸಲ್ಲಿಕೆ*
*ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿದೆ.*
*ಅರ್ಜಿ ಶುಲ್ಕ*
*ಸಾಮಾನ್ಯ ಅಭ್ಯರ್ಥಿಗಳಿಗೆ ರೂ.400/-ಒಬಿಸಿ ಅಭ್ಯರ್ಥಿಗಳಿಗೆ ರೂ.300/-ಎಸ್.ಸಿ/ಎಸ್.ಟಿ/ಪ್ರ-1/ಮಹಿಳಾ ಅಭ್ಯರ್ತಿಗಳಿಗೆ ರೂ ರೂ.200/-*
*ಆಯ್ಕೆ ವಿಧಾನ*
*ಅಭ್ಯರ್ಥಿಗಳನ್ನು ಪಿಯುಸಿ ಅಥವಾ ಸಿಬಿಎಸ್ಇ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.*
*ಪ್ರಮುಖ ದಿನಾಂಕಗಳು*
*ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 10-10-2017ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-11-2017*
*ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ* *ಸಂಖ್ಯೆ: 08539-221690*
ಹೆಚ್ಚಿನ ಮಾಹಿತಿಗಾಗಿ koppal-va.kar.nic.in
No comments:
Post a Comment